ವಿಶ್ವದರ್ಶನದಲ್ಲಿ ನಡೆದ ಕನ್ನಡ ಗೀತ ಗಾಯನ

ಯಲ್ಲಾಪುರ: ಇಲ್ಲಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ “ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ” ಕಾರ್ಯಕ್ರಮ ನಡೆಯಿತು.
    ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು ಏಕಕಾಲಕ್ಕೆ ಸರ್ಕಾರ ನಿಗದಿ ಪಡಿಸಿದ ಗಾಯನಗಳನ್ನು ಪ್ರಸ್ತುತ ಪಡಿಸಿದರು. ಸಭಾ ಕಾರ್ಯಕ್ರಮವನ್ನು ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದಾದ ನಂತರ ಮಕ್ಕಳು ಕನ್ನಡದಲ್ಲಿ ಮಾತನಾಡುವ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.  ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಇಲಾಖೆಯ ರಾಜ್ಯ ವಿಕೇಂದ್ರಿಕರಣ ಯೋಜನೆಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಅವರು ಸಂದೇಶ ನುಡಿಗಳನ್ನು ನುಡಿದರು. ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ನರಸಿಂಹ ಕೋಣೆಮನೆ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವೀಣಾ ಭಾಗ್ವತ್ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಕ್ತಾ ಶಂಕರ್ ಸ್ವಾಗತಿಸಿದರು. ಡಿ.ಕೆ ಗಾಂವ್ಕರ್ ನಿರ್ವಹಿಸಿದರು. ಗಣೇಶ ಭಟ್ಟ ವಂದಿಸಿದರು.

Leave a Reply

Your email address will not be published. Required fields are marked *