ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಸಂಸ್ಥೆಯ ಶೈಕ್ಷಣಿಕ ಸಲಹೆಗಾರಾದ ತಿಮ್ಮಣ್ಣ ಭಟ್ಟ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಅಷ್ಟಾವಧಾನಿ ಗಣೇಶ ಭಟ್ಟ ಕೊಪ್ಪಲತೋಟ, ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಹಾಗೂ ವಿವಿಧ ಅಂಗಸoಸ್ಥೆಯ ಮುಖ್ಯಸ್ಥರು ಹಾಜರಿದ್ದರು.ಅಂಕೋಲಾದ ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ನಲ್ಲಿ 73ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಕೆ.ಆರ್ ನಾಯಕ ಬೇಲಿಕೇರಿ ಅವರು ಧ್ವಜಾರೋಹಣ ಮಾಡಿದರು. ನಂತರ ಮಾತನಾಡಿದ ಅವರು, ಭಾರತೀಯ ಸಂವಿಧಾನವು ಪವಿತ್ರವಾದ ಗೃಂಥವಾಗಿದೆ. ವಿದ್ಯಾರ್ಥಿಗಳು ಇದನ್ನು ಅದ್ಯಯನ ಮಾಡಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಗುರುದತ್ತ ನಾಯಕ, ಸಂಸ್ಥೆಯ ಪ್ರಾಚಾರ್ಯರಾದ ಶಂಕರಗೌಡ ಕಡಿಮನಿ ಮೊದಲಾದವರು ಇದ್ದರು.