ಅಂಕೋಲಾ: ಏಡ್ಸ್ ರೋಗದ ಕುರಿತು ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಬುಧವಾರ ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ಪಟ್ಟಣದ ವಿವಿಧಡೆ ಜಾಥಾ ನಡೆಸಲಾಯಿತು.
ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ, ತಾಲೂಕಾ ಆಸ್ಪತ್ರೆ ಅವರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಪುರಸಭೆ ಮುಖ್ಯಾಧಿಕಾರಿ ಶೃತಿ ಕಾಯಕವಾಡ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಾರಣಾಂತಿಕವಾದ ಏಡ್ಸ್ ರೋಗವನ್ನು ನಿರ್ಮೂಲನೆ ಮಾಡಲು ಎಲ್ಲರು ಪಣ ತೊಡಬೇಕು ಎಂದು ಕರೆ ನೀಡಿದರು. ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಹೇಂದ್ರ ನಾಯಕ ಮಾತನಾಡಿ, ಏಡ್ಸ್ ಹರಡುವ ಹಾಗೂ ತಡೆಗಟ್ಟುವ ವಿಧಾನಗಳ ಬಗ್ಗೆ ತಿಳಿಸಿದರು. ತಾಲೂಕಾ ಆರೋಗ್ಯ ವೈದ್ಯಾಧಿಕಾರಿ ಡಾ. ನಿತೀನ್ ಹೊಸ್ಮಲೇಕರ್ ಏಡ್ಸ್ ದಿನಾರಣೆಯ ಮಹತ್ವದ ಕುರಿತು ವಿವರಿಸಿದರು. ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ನ ಪ್ರಾಚಾರ್ಯರಾದ ಶಂಕರಗೌಡ ಕಡೆಮನೆ, ಸಿಬ್ಬಂದಿ ರಶ್ಮಿ ನಾಯಕ, ನಯನಾ ತಾಂಡೇಲ್, ಜ್ಯೋತಿ ನಾಯ್ಕ ಮೊದಲಾದವರು ಜಾಥಾದಲ್ಲಿ ಇದ್ದರು.