ಯಲ್ಲಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿವಿಧ ಕಾರ್ಯಕ್ರಮಗಳು ಗಮನ ಸೆಳೆದವು.
ಜನ ಜಾಗೃತಿಗಾಗಿ ನಡೆದ ಬೀದಿ ನಾಟಕ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಇದಕ್ಕೂ ಮುನ್ನ ಕನ್ನಡ ನಾಡಿನ ಹಿರಿಯರ ವೇಷ ಭೂಷಣಗಳೊಂದಿಗೆ ಮಕ್ಕಳು ಮೆರವಣಿಗೆ ನಡೆಸಿದರು. ಅಖಿಲ ಭಾರತ ಸಾಹಿತ್ಯ ಪರಿಷದ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಘುನಂದನ್ ಭಟ್ಟ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ, ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಗಣೇಶ ಭಟ್ಟ ಇದ್ದರು.