
ಯಲ್ಲಾಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ “ಕಲಿಕಾರ್ಥಿ ಸಹಾಯ ಕೇಂದ್ರ”ವೂ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಡಿಸೆಂಬರ್ 1ರಂದು ಉದ್ಘಾಟನೆ ಆಗಲಿದೆ.
ಅಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಆನ್ ಲೈನ್ ಮೂಲಕ ಕಲಿಕಾರ್ಥಿ ಸಹಾಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ ಸಿದ್ಧಿ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ನರಸಿಂಹ ಕೋಣೆಮನೆ, ಕಲಿಕಾರ್ಥಿ ಸಹಾಯ ಕೇಂದ್ರದ ಸಂಯೋಜಕರಾದ ಡಾ. ದತ್ತಾತ್ರಯ ಗಾಂವ್ಕರ್ ಮೊದಲಾದವರು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಯಲ್ಲಾಪುರ, ಶಿರಸಿ, ಸಿದ್ದಾಪುರ, ಮುಂಡಗೋಡ ತಾಲೂಕಿನ ವಿದ್ಯಾರ್ಥಿಗಳಿಗೆ ಈ ಕೇಂದ್ರ ನೆರವಾಗಲಿದೆ. ಡಿ.12ರ ವರೆಗೆ ದಂಡ ರಹಿತವಾಗಿ ವಿವಿಧ ಪದವಿ ಹಾಗೂ ಡಿಪ್ಲೋಮಾ ಕೋರ್ಸಗಳಿಗೆ ನೋಂದಣಿ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.