ಅಂಕೋಲಾ: ಇಲ್ಲಿನ ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ನಲ್ಲಿ “ವಿಶ್ವ ಪ್ರಕೃತಿ ದಿನ” ಅಂಗವಾಗಿ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಮಾಜಿಕ ಕಾರ್ಯಕರ್ತ ಕೆ.ಆರ್ ನಾಯಕ ಬೇಲಿಕೇರಿ ಮಾತನಾಡಿ, ಅಭಿವೃದ್ದಿಯ ಹೆಸರಿನಲ್ಲಿ ಪರಿಸರ ಸಂರಕ್ಷಣೆಯನ್ನು ಮರೆಯಬಾರದು ಎಂದು ಕರೆ ನೀಡಿದರು. ಸಂಸ್ಥೆಯ ಉಪ ಪ್ರಾಚಾರ್ಯರಾದ ದೀಪಾಲಿ ಕುರ್ಡೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಚಾರ್ಯರಾದ ಶಂಕರಗೌಡ ಕಡೆಮನೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಗುರುದತ್ತ ಬಿ ನಾಯಕ ಇದ್ದರು. ನಯನಾ ತಾಂಡೇಲ್ ಕಾರ್ಯಕ್ರಮ ನಿರ್ವಹಿಸಿದರು. ರಶ್ಮಿ ನಾಯಕ ವಂದಿಸಿದರು.