ಅಂಕೋಲಾ: ಇಲ್ಲಿನ ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ನ 20ನೇ ಬ್ಯಾಚ್ ನ ವಿದ್ಯಾರ್ಥಿಗಳು ವೃತ್ತಿ ಜೀವನಕ್ಕೆ ಸಿದ್ಧಗೊಂಡಿದ್ದಾರೆ. ನರ್ಸಿಂಗ್ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆವಾರದಲ್ಲಿ ಬುಧವಾರ ಬೀಳ್ಕೊಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಉಪ ಪ್ರಾಚಾರ್ಯರಾದ ದೀಪಾಲಿ ಕುರ್ಡೇಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವೃತ್ತಿ ಜೀವನದಲ್ಲಿ ಪ್ರತಿಯೊಬ್ಬರು ಶಿಸ್ತು ಹಾಗೂ ಸಂಯಮವನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಗುರುದತ್ತ ಬಿ ನಾಯಕ ಅವರು ವೇದಿಕೆಯಲ್ಲಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಚಾರ್ಯರಾದ ಶಂಕರಗೌಡ ಕಡೇಮನೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಕಾವ್ಯ ನಾಯ್ಕ ಹಾಗೂ ಸ್ವಾತಿ ಗುನಗಾ ಕಾರ್ಯಕ್ರಮ ನಿರ್ವಹಿಸಿದರು. ದಿವ್ಯಾ ಗೌಡ ಸ್ವಾಗತಿಸಿದರು. ರೂಪಾ ಗೌಡ ವಂದಿಸಿದರು.