Archives: News

ಮಕ್ಕಳ ವಿಕಸನಕ್ಕೆ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯ

ಯಲ್ಲಾಪುರ: ಮಕ್ಕಳಿಗೆ ಬುದ್ದಿವಂತಿಕೆ ಜೊತೆ ಕೌಶಲ್ಯವೂ ಅಗತ್ಯ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ವಿ.ಎಸ್ ಪಾಟೀಲ ಹೇಳಿದರು.   ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಹೈಟೆಕ್ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದರು.    ಅನ್ನದಾನ, ರಕ್ತದಾನಕ್ಕಿಂತಲೂ ವಿದ್ಯಾದಾನ ಶ್ರೇಷ್ಠವಾಗಿದೆ. ಹೀಗಾಗಿಯೇ ಹಿಂದಿನ ಕಾಲದಲ್ಲಿ ಮಠಗಳಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿತ್ತು. ಪ್ರಸ್ತುತ ದಿನಗಳಲ್ಲಿ ಶಿಕ್ಷಕರಿಂದ ಮಾತ್ರ ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿ ಸಾಧ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಮಕ್ಕಳ ಜ್ಞಾನ ವೃದ್ಧಿಗೆ ಕಂಪ್ಯೂಟರ್ ಶಿಕ್ಷಣ ಅತೀ ಅಗತ್ಯವಾಗಿದೆ. ಮಕ್ಕಳು…

Read More

ಭಗವದ್ಗೀತೆ ಅನುಕರಣೆಯಿಂದ ಯಶಸ್ಸು ಸಾಧ್ಯ

ಯಲ್ಲಾಪುರ: ವಿದ್ಯಾರ್ಥಿ ಜೀವನದಲ್ಲಿಯೇ ಶ್ರದ್ಧಾ, ಮೇಧ, ಪ್ರಜ್ಞಾ ಎಂಬ ಮೂರು ಶಕ್ತಿಗಳನ್ನು ರೂಡಿಸಿಕೊಂಡವರು ಅಸಾಮಾನ್ಯ ವ್ಯಕ್ತಿಯಾಗಿ ಬೆಳೆಯುತ್ತಾರೆ ಎಂದು ಕರಡೊಳ್ಳಿಯ ಗೋವರ್ಧನ ಟ್ರಸ್ಟ್ ಕಾರ್ಯದರ್ಶಿ ವೇ.ಗಣಪತಿ ಭಟ್ಟ ಕೋಲಿಬೇಣ ಹೇಳಿದರು.ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 8 ದಿನಗಳಿಂದ ನಡೆದ ಗೀತಾಭಿಯಾನ ಮುಕ್ತಾಯ ಮತ್ತು ಗೀತಾ ಜಯಂತಿ ಆಚರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಬಾಲ್ಯಾವಸ್ಥೆಯಲ್ಲಿ ಶ್ರದ್ಧಾ, ಮೇಧಾ, ಪ್ರಜ್ಞಾ ಎಂಬ ಮೂರು ಶಕ್ತಿಗಳನ್ನು ಬೆಳೆಸಿಕೊಳ್ಳಲು ಸೂಕ್ತ ಮಾರ್ಗದರ್ಶನದ ಅಗತ್ಯವಿರುತ್ತದೆ. ಭಗವದ್ಗೀತೆಯ ಶ್ಲೋಕಪಠಣ ಅಭ್ಯಾಸ ಹಾಗೂ ಅರ್ಥೈಸಿಕೊಳ್ಳುವ ಮೂಲಕ…

Read More

ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್ ಓಡಾಟ

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯೂ ವಿವಿಧ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸಂಚಾರ ಶುರು ಮಾಡಿದೆ.    ಗುಳ್ಳಾಪುರ, ರಾಮನಗುಳಿ, ಕೊಡ್ಲಗದ್ದೆ, ಅರಬೈಲ್, ಇಡಗುಂದಿ ಮಾರ್ಗವಾಗಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಬಸ್ ಓಡಾಟ ನಡೆಸುತ್ತಿದೆ. ಸೋಮವಾರ ಊರಿಗೆ ಆಗಮಿಸಿದ ಬಸ್ ಅನ್ನು ಗ್ರಾಮದ ಜನ ಪೂಜೆ ಮಾಡಿ ಬರಮಾಡಿಕೊಂಡರು.  ಈ ವೇಳೆ ಪಾಲಕರಾದ ಸುದಾಕರ ಭಟ್ಟ ಹೆಗ್ಗಾರ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಕಾಳಜಿ ವಹಿಸಿದೆ….

Read More

ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಪರಾಧ ತಡೆ ಜಾಗೃತಿ

ಯಲ್ಲಾಪುರ: ಬಾಲ್ಯ ವಿವಾಹ, ಬಾಲ ಬಿಕ್ಷಾಟನೆ ಸೇರಿದಂತೆ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳ ವಿರುದ್ಧ ಹೋರಾಡಲು ವಿದ್ಯಾರ್ಥಿಗಳು ಧ್ವನಿ ಎತ್ತಬೇಕು ಎಂದು ಪಟ್ಟಣ ಪೊಲೀಸ್ ಠಾಣೆಯ ಎ.ಎಸ್.ಐ ದೀಪಕ ನಾಯ್ಕ ಮನವಿ ಮಾಡಿದರು.ಸೋಮವಾರ ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 10ಕ್ಕೂ ಅಧಿಕ ಇಲಾಖೆಗಳು ಕೆಲಸ ಮಾಡುತ್ತಿದೆ. ಮಹಿಳೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೊಲೀಸರು ಸಹ ಸಾಕಷ್ಟು…

Read More

ರಾಷ್ಟ್ರಮಟ್ಟದ ಸ್ಕೇಟಿಂಗ್ ; ರಾಜ್ಯ ತಂಡದ ನಾಯಕನಾಗಿ ವಿಶ್ವದರ್ಶನ ವಿದ್ಯಾರ್ಥಿ

ಯಲ್ಲಾಪುರ: ಚಂಡಿಗಢದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಾಕಿ ರೂಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಸಬ್ ಜೂನಿಯರ್ ತಂಡದ ನಾಯಕನಾಗಿವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತಪನ ಲಕ್ಷ್ಮೀಕಾಂತ ಭಟ್ಟ ಆಯ್ಕೆಯಾಗಿದ್ದಾರೆ.  ತಪನ  ಲಕ್ಷ್ಮೀಕಾಂತ ಭಟ್ಟ ಅವರೊಂದಿಗೆ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾದ ಅನ್ಶ ಪತ್ತಾರ, ಅಂಜನಾ ರವೀಂದ್ರ ಭಟ್, ದಿಯಾ ಸುರೇಶ್ ರೇವಣಕರ್, ಋತುರಜ್ ವಿಶಾಲ್ ಕಟ್ವಾಕರ್, ನಮನ್ ಎಸ್ ಕೆ, ಪುಷ್ಕರ್ ಪ್ರಕಾಶ, ಗುರುರಾಜ್ ವಿಶಾಲ್ ಕಟ್ವಾಕರ್ ಸಹ ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಡಿಸೆಂಬರ್ 15ರಿಂದ…

Read More

ದೂರ ಶಿಕ್ಷಣ ವ್ಯವಸ್ಥೆ ಮೂಲಕ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ ವಿಶ್ವದರ್ಶನ

ಯಲ್ಲಾಪುರ: ದೇಶದ ಯಾವುದೇ ಮೂಲೆಯಲ್ಲಿದ್ದರೂ ದೂರ ಶಿಕ್ಷಣದ ಮೂಲಕ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕಲ್ಪಿಸಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಹೇಳಿದರು.ಬುಧವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ “ಕಲಿಕಾರ್ಥಿ ಸಹಾಯ ಕೇಂದ್ರ”ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು.ದೂರ ಶಿಕ್ಷಣ ವ್ಯವಸ್ಥೆಯಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಗೃಹಿಣಿಯರು, ವೃತ್ತಿ ನಿರತರು ಸೇರಿದಂತೆ ಹಲವರು ಉನ್ನತ ವ್ಯಾಸಂಗಕ್ಕಾಗಿ ದೂರ ಶಿಕ್ಷಣ ವ್ಯವಸ್ಥೆಯನ್ನು ಅವಲಂಭಿಸಿದ್ದಾರೆ. ಮನೆಯಲ್ಲಿಯೇ ಕುಳಿತು…

Read More

ನರ್ಸಿಂಗ್ ವಿದ್ಯಾರ್ಥಿಗಳಿಂದ ಏಡ್ಸ್ ಕುರಿತು ಜಾಗೃತಿ

ಅಂಕೋಲಾ: ಏಡ್ಸ್ ರೋಗದ ಕುರಿತು ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಬುಧವಾರ ವಿಶ್ವದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ಪಟ್ಟಣದ ವಿವಿಧಡೆ ಜಾಥಾ ನಡೆಸಲಾಯಿತು.ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ, ತಾಲೂಕಾ ಆಸ್ಪತ್ರೆ ಅವರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಪುರಸಭೆ ಮುಖ್ಯಾಧಿಕಾರಿ ಶೃತಿ ಕಾಯಕವಾಡ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಾರಣಾಂತಿಕವಾದ ಏಡ್ಸ್ ರೋಗವನ್ನು ನಿರ್ಮೂಲನೆ ಮಾಡಲು ಎಲ್ಲರು ಪಣ ತೊಡಬೇಕು ಎಂದು ಕರೆ ನೀಡಿದರು. ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಹೇಂದ್ರ ನಾಯಕ ಮಾತನಾಡಿ, ಏಡ್ಸ್ ಹರಡುವ…

Read More

ಡಿಸೆಂಬರ್ 1ರಂದು ಉದ್ಘಾಟನೆ ಆಗಲಿರುವ KSOU ಕಲಿಕಾ ಕೇಂದ್ರ

ಯಲ್ಲಾಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ “ಕಲಿಕಾರ್ಥಿ ಸಹಾಯ ಕೇಂದ್ರ”ವೂ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಡಿಸೆಂಬರ್ 1ರಂದು ಉದ್ಘಾಟನೆ ಆಗಲಿದೆ.   ಅಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಆನ್ ಲೈನ್ ಮೂಲಕ ಕಲಿಕಾರ್ಥಿ ಸಹಾಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ ಸಿದ್ಧಿ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ನರಸಿಂಹ ಕೋಣೆಮನೆ, ಕಲಿಕಾರ್ಥಿ ಸಹಾಯ ಕೇಂದ್ರದ ಸಂಯೋಜಕರಾದ ಡಾ. ದತ್ತಾತ್ರಯ…

Read More

ವಿಶ್ವದರ್ಶನದಲ್ಲಿ ನಡೆದ ವಸ್ತು ಪ್ರದರ್ಶನ : ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಅವರು ಬಹುಮಾನ ವಿತರಿಸಿದರು.ವಿದ್ಯಾರ್ಥಿಗಳಾದ ಪ್ರಾರ್ಥನಾ, ಅಕ್ಷರಾ, ಪ್ರಣತಿ, ನೂತನಾ, ಪ್ರಣೀತ, ಪ್ರಥ್ವಿ ಮೊದಲಾದವರು ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳಾದ ಪ್ರಣವ್ ಶಾನಭಾಗ ಹಾಗೂ ಸಹನಾ ಭಾಗವತ್ ಅವರು ಭಾರತೀಯ ಸಂವಿಧಾನದ ಕುರಿತು ಮಾಹಿತಿ ನೀಡಿದರು. ಶಿಕ್ಷಕಿ ಆಸ್ಮಾ ಶೇಖ್ ಅವರು ಸಂವಿಧಾನದ ಅಗತ್ಯತೆಯ ಕುರಿತು ವಿವರಿಸಿದರು. ಪ್ರಾಚಾರ್ಯರಾದ…

Read More

ಪೊಲೀಸ್ ಕಾರ್ಯ ವಿಧಾನದ ಬಗ್ಗೆ ಮಾಹಿತಿ ಪಡೆದ ವಿದ್ಯಾರ್ಥಿಗಳು

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಶನಿವಾರ ಪಟ್ಟಣದ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಕರ್ತವ್ಯ ನಿರ್ವಹಣೆಯ ಕುರಿತು ಠಾಣೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.ವಿದ್ಯಾರ್ಥಿಗಳಿಗೆ ಪೊಲೀಸ್ ಕರ್ತವ್ಯದ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕ “ತೆರೆದ ಮನೆ” ಎಂಬ ಕಾರ್ಯಕ್ರಮವನ್ನು ರೂಪಿಸಿದೆ. ಅದರ ಅಂಗವಾಗಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಹಾಗೂ ಬಿ.ಇಡಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಪೊಲೀಸ್ ನಿರೀಕ್ಷಕರಾದ ಸುರೇಶ್ ಯಳ್ಳೂರು ಅವರು ವಿದ್ಯಾರ್ಥಿಗಳನ್ನು…

Read More