ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಅವರು ಬಹುಮಾನ ವಿತರಿಸಿದರು.
ವಿದ್ಯಾರ್ಥಿಗಳಾದ ಪ್ರಾರ್ಥನಾ, ಅಕ್ಷರಾ, ಪ್ರಣತಿ, ನೂತನಾ, ಪ್ರಣೀತ, ಪ್ರಥ್ವಿ ಮೊದಲಾದವರು ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳಾದ ಪ್ರಣವ್ ಶಾನಭಾಗ ಹಾಗೂ ಸಹನಾ ಭಾಗವತ್ ಅವರು ಭಾರತೀಯ ಸಂವಿಧಾನದ ಕುರಿತು ಮಾಹಿತಿ ನೀಡಿದರು. ಶಿಕ್ಷಕಿ ಆಸ್ಮಾ ಶೇಖ್ ಅವರು ಸಂವಿಧಾನದ ಅಗತ್ಯತೆಯ ಕುರಿತು ವಿವರಿಸಿದರು. ಪ್ರಾಚಾರ್ಯರಾದ ಗಣೇಶ್ ಭಟ್ಟ ಅವರು ಅಧ್ಯಕ್ಷತೆ ವಹಿಸಿದ್ದರು. ಇದೇ ವೇದಿಕೆಯಲ್ಲಿ ನಡೆದ ಶಾರದಾ ಪೂಜೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ನರಸಿಂಹ ಕೋಣೆಮನೆ ಅವರು ಭಾಗವಹಿಸಿದ್ದರು.