ಯಲ್ಲಾಪುರ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಸ್ಯಾಮಸಂಗ್ ಕಂಪನಿಯ ಹಿರಿಯ ಉಪಾಧ್ಯಕ್ಷ ಬಾಲಾಜಿ ಹೊಲೂರ್ ಅವರು ವಯಕ್ತಿಕವಾಗಿ ಟಿವಿಯೊಂದನ್ನು ದೇಣಿಗೆಯಾಗಿ ನೀಡಿದ್ದಾರೆ.
ಟಿವಿ ಹಸ್ತಾಂತರಿಸಿ ಮಾತನಾಡಿದ ಅವರು, ಕಠಿಣ ಪ್ರರಿಶ್ರಮದಿಂದ ಯಶಸ್ಸು ಸಾಧ್ಯವಿದೆ. ಸವಾಲುಗಳನ್ನು ಸ್ವೀಕರಿಸಿ ಮುನ್ನಡೆಯುವವರಿಗೆ ಹೆಚ್ಚು ಅವಕಾಶಗಳು ದೊರೆಯುತ್ತದೆ ಎಂದು ಹೇಳಿದರು. ಮುಖ್ಯಾಧ್ಯಾಪಕರಾದ ಮುಕ್ತಾ ಶಂಕರ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಾಳ್ಮೆ ಹಾಗೂ ಸಹನೆಯನ್ನು ಬೆಳೆಸಿಕೊಳ್ಳಬೇಕು. ಧನಾತ್ಮಕ ಚಿಂತನೆಗಳಿಗೆ ಹೆಚ್ಚಿನ ಆಧ್ಯತೆ ಕೊಡಬೇಕು ಎಂದರು. ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ದ ಪ್ರಾಚಾರ್ಯರಾದ ಎಸ್.ಎಲ್ ಭಟ್ಟ, ಶಿಕ್ಷಕರಾದ ಖೈರುನ್ನಿಸಾ ಶೇಖ್ ಇತರರು ಇದ್ದರು. ಪ್ರೇಮಾ ಗಾಂವ್ಕರ್ ನಿರ್ವಹಿಸಿದರು. ಶ್ಯಾಮಲಾ ಕೆರೆಗದ್ದೆ ಸ್ವಾಗತಿಸಿದರು. ನೀತಾ ನಾಯ್ಕ ಪ್ರಾರ್ಥಿಸಿದರು. ಮಹೇಶ ನಾಯ್ಕ ವಂದಿಸಿದರು.